Big News ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ; ಪೆಟ್ರೋಲ್ ದರದಲ್ಲಿ ₹25 ಇಳಿಕೆ
Wednesday, December 29, 2021
ನವದೆಹಲಿ:ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜಾರ್ಖಂಡ್ ರಾಜ್ಯದ ಬಡ ಜನರಿಗೆ ಅಲ್ಲಿನ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುವುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಸಿದ್ದಾರೆ.
ಆದರೆ ಇದು ಎಲ್ಲರಿಗೂ ಈ ದರದಲ್ಲಿ ಪೆಟ್ರೋಲ್ ಸಿಗುವುದಿಲ್ಲ, ಬಿಪಿಎಲ್ ಕಾರ್ಡ್ ಹೊಂದಿರುವ ಬಡ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ ನೀಡಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಹೇಮಂತ್ ಸೊರೇನ್ "ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು ಮತ್ತು ಮಧ್ಯಮ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಟೂ ವೀಲ್ಹರ್ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ₹25 ರೂಪಾಯಿ ಇಳಿಕೆ ಮಾಡಲಾಗುತ್ತಿದ್ದು ಬರುವ (2022)ಜನವರಿ 26, ರಿಂದ ಇದರ ಪ್ರಯೋಜನ ಪಡೆಯಬಹುದಾಗಿದೆ" ಎಂದು ತಿಳಿಸಿದ್ದಾರೆ.