ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ಮುಸ್ಲಿಂ ವಿದ್ಯಾರ್ಥಿನಿಯರ ಪಟ್ಟು ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ

ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ಮುಸ್ಲಿಂ ವಿದ್ಯಾರ್ಥಿನಿಯರ ಪಟ್ಟು ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ


ಉಡುಪಿ: ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ಘಟನೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಲೇಜು ಪ್ರಾಂಶುಪಾಲರಾದ ರುದ್ರೆಗೌಡ "ನಮ್ಮಲ್ಲಿ ಈವರೆಗೆ ಹಿಜಾಬ್ ಹಾಕಿಕೊಂಡು ತರಗತಿಗೆ ಹಾಜರಾಗುವ ನಿಯಮ ಇರಲಿಲ್ಲ. ಈ ಕಾಲೇಜಿನಲ್ಲಿ ಅರುವತ್ತು ಮುಸ್ಲಿಂ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ.ಅದರಲ್ಲಿ ಕಳೆದ ಮೂರು ದಿನಗಳಿಂದ ಕೆಲವು ಮಂದಿ ಮಾತ್ರ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಇವರ ಮನೆಯವರನ್ನು ಕರೆದು ಮಾತುಕತೆ ಮಾಡಲಾಗಿದೆ. ಅವರೆಲ್ಲ ಅರ್ಥ ಮಾಡಿಕೊಂಡು ಒಪ್ಪಿಗೆ ಸೂಚಿಸಿದ್ದಾರೆ" ಎಂದಿದ್ದಾರೆ.
ಆದರೆ ವಿದ್ಯಾರ್ಥಿನಿಯರು ಮಾತ್ರ "ನಮ್ಮ ಹಾಜರಾತಿ ಹೋಗುತ್ತಿದೆ.ನಮಗೆ ತರಗತಿ ಪ್ರವೇಶ ಮಾಡಲು ಬಿಡುತ್ತಿಲ್ಲ.ಕಳೆದ ಮೂರು ದಿನಗಳಿಂದ ಹೊರಗೆ ನಿಲ್ಲುವಂತಾಗಿದೆ.ಪೋಷಕರು ಕಾಲೇಜಿಗೆ ಬಂದು ಮಾತಕತೆ ನಡೆಸಿದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ.ನಮ್ಮ ಕಲಿಕೆಗೆ ಇದರಿಂದ ತೊಂದರೆಯಾಗುತ್ತಿದೆ.ನಮಗೆ ಹಿಜಾಬ್ ಧರಿಸಿ ಬರಲು ಅನುಮತಿ ನೀಡ್ಬೇಕು" ಎಂದು ಮನವಿ‌ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article