ಮಂಗಳೂರು: BJP ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಗೆ ಮತ್ತೆ ಕೋವಿಡ್ ದೃಢ

ಮಂಗಳೂರು: BJP ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಗೆ ಮತ್ತೆ ಕೋವಿಡ್ ದೃಢ


ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇದು ಎರಡನೇ ಬಾರಿ ಅವರಿಗೆ ಕೊರೋನಾ ತಗುಲಿದ್ದು, ಮೊದಲ ಅಲೆಯ ಸಂದರ್ಭದಲ್ಲಿಯೂ ಅವರಿಗೆ ಸೋಂಕು ತಗುಲಿತ್ತು. ಇದೀಗ ಟೆಸ್ಟ್ ವೇಳೆ ಎರಡನೇ ಬಾರಿ ಅವರಿಗೆ ಕೋವಿಡ್ ಸೋಂಕು ತಗುಲಿದೆ.


ನಳಿನ್ ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಗೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. "ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದಿದ್ದಾರೆ..

Ads on article

Advertise in articles 1

advertising articles 2

Advertise under the article