ರಾಜ್ಯದಲ್ಲಿ ವಾರಂತ್ಯ ಕರ್ಪ್ಯೂ ಜಾರಿ

ರಾಜ್ಯದಲ್ಲಿ ವಾರಂತ್ಯ ಕರ್ಪ್ಯೂ ಜಾರಿ


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.


 ಈ ಬಗ್ಗೆ ಮಾಹಿತಿ ನೀಡಿದ  ಕಂದಾಯ ಸಚಿವರಾದ ಆರ್ ಅಶೋಕ್, ಬರುವ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಕರ್ನಾಟಕದಾದ್ಯಂತ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ.10 ಮತ್ತು 12ನೇ ತರಗತಿ ಹೊರತುಪಡಿಸಿ ಇನ್ನುಳಿದ ತರಗತಿ ನಾಳೆಯಿಂದಲೇ ಬಂದ್ ಮಾಡಿ ಆನ್ ಲೈನ್ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ತಿಳಿಸಿದರು.

೧.ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಪ್ರವೇಶಕ್ಕೆ ಅವಕಾಶ

೨.ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್  ಲಸಿಕೆ ಕಡ್ಡಾಯ ಆಗಿರಲಿದೆ. 

೩.ಮದುವೆ Outdoor 200, Indoor 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್  ಲಸಿಕೆ ಆಗಿರಬೇಕು. 

೪.ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

೫.ಸರಾಕಾರಿ ಕಚೇರಿಗಳು ಮಾಲ್​ಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. 

೬.ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಮತ್ತು ಇಲ್ಲಿಗೆ ಭೇಟಿ ನೀಡುವವರಿಗೆ ವ್ಯಾಕ್ಸಿನೇಷನ್‌ ಕಡ್ಡಾಯ.


Ads on article

Advertise in articles 1

advertising articles 2

Advertise under the article