ಮಂಗಳೂರು:ಹೊಟೇಲ್ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
Monday, January 10, 2022
ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಹೋಟೆಲ್ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿ ಇಂದು ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಕಾಣಿಸಿಕೊಂಡ ಘಟನೆ ನಡೆದಿದೆ.
ಮೊದಲು ಹೋಟೆಲ್ ನ ಕಟ್ಟಡದಲ್ಲಿರುವ LG ಶೋರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಆ ಬೆಂಕಿ ಇತರೆಡೆಗಳಲ್ಲಿ ಆವರಿಸಿ ಹೊಟೇಲ್ ನಲ್ಲಿಯೂ ಕಾಣಿಸಿಕೊಂಡಿದೆ. ಪರಿಣಾಮ ಕಟ್ಟಡದ ತುಂಬಾ ದಟ್ಟ ಹೊಗೆ ಆವರಿಸಿಕೊಂಡಿದೆ.
ಇದೀಗ ಕಟ್ಟಡದ ಎಲ್ಲ ಮಳಿಗೆಗಳಿಗೂ ಬೆಂಕಿ ಹಬ್ಬಿರುವ ಶಂಕೆ ವ್ಯಕ್ತವಾಗುತ್ತಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದಾರೆ.