Food poison: ವಿಷಾಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Food poison: ವಿಷಾಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಯಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ.

ರಾತ್ರಿ ಊಟ ಸೇವಿಸಿ ಮಲಗಿದ್ದು ಬೆಳಗ್ಗೆ ಸುಸ್ತಾಗಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಕೂಡಲೇ ವಾಹನ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು‌ ಆಸ್ಪತ್ರೆ ಮೂಲಗಳು ತಿಳಿಸಿದೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಬೆಂಗಳೂರಿನಿಂದ ನೇರವಾಗಿ ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿನ ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ನಂತರ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ  "ಔಷಧೋಪಚಾರ ಮಾಡುವಂತೆ ಆರೋಗ್ಯ ಇಲಾಖಾಧಿಕಾರಿಗಳಿಗೆ ಹೇಳಿದ್ದೇನೆ. ಆಸ್ಪತ್ರೆಯಲ್ಲೇ ಇದ್ದು ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ

Ads on article

Advertise in articles 1

advertising articles 2

Advertise under the article