ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ 'ಮಹಿಳೆಯರು'(gang r*pe)

ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ 'ಮಹಿಳೆಯರು'(gang r*pe)

ನವದೆಹಲಿ: ಗ್ಯಾಂಗ್ ರೇಪ್ ಗೆ ಒಳಗಾಗಿದ್ದ ಸಂತ್ರಸ್ತ ಯುವತಿಗೆ ಚಪ್ಪಲಿ ಹಾರ ಹಾಕಿ,ತಲೆ ಬೋಳಿಸಿ ಮೆರವಣಿಗೆ ಮಾಡಿದ ಅತಿ ಅಮಾನುಷ ಕೃತ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ‌.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದ್ದು ನಾಗರಿಕ ಸಮಾಜದಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. 

ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ, ಅತ್ಯಾಚಾರ ಸಂತ್ರಸ್ತೆಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಲ್ಲಿ ಚಪ್ಪಲಿ ಹಾರವನ್ನೂ ಹಾಕಿ‌ನಂತರ ಆಕೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆ ಮಾಡಿ ಘೋರಾತಿಘೋರ ವಿಕೃತಿ ತೋರಿದ್ದಾರೆ. ಪ್ರಕರಣ ಗಂಭೀರತೆಯನ್ನು ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತಕೊಂಡ ಪೊಲೀಸ್ ಇಲಾಖೆ ವಿಡಿಯೋದಲ್ಲಿ ಇರುವ ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ.

ಈ ಪ್ರಕರಣವನ್ನು ಮಹಿಳಾ ಆಯೋಗ  ಗಂಭೀರವಾಗಿ ಪರಿಗಣಿಸಿದೆ. ಸಂತ್ರಸ್ತ ಯುವತಿಯನ್ನು ಭೇಟಿಯಾದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಸೂಕ್ತ ಕ್ರಮ ಮತ್ತು ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ದೆಹಲಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಂತ್ರಸ್ತ ಯುವತಿಯನ್ನು  ಮನೆಯಿಂದ ಅಪಹರಿಸಿ, ಸ್ಥಳೀಯವಾಗಿ ಮದ್ಯ ಮತ್ತು ಮಾದಕವಸ್ತುಗಳ ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಮೂರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗುತ್ತಿರುವಾಗ, ಅಲ್ಲಿದ್ದ ಮಹಿಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಲು ಪುರುಷರನ್ನು ಪ್ರಚೋದಿಸುತ್ತಿದ್ದರು ಎನ್ನಲಾಗಿದೆ. ಅತ್ಯಾಚಾರದಿಂದ ಘಾಸಿಗೊಂಡಿದ್ದ ಯುವತಿಯ ಮೇಲೆ ಮಹಿಳೆಯರು ನಂತರ ತೋರಿದ ವಿಕೃತಿಯಿಂದ ಮತ್ತಷ್ಟು ಮಾನಸಿಕ ಆಘಾತಕ್ಕೊಳಗಾಗಿದ್ದಾಳೆ

Ads on article

Advertise in articles 1

advertising articles 2

Advertise under the article