ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಬಟ್ಟೆಯಲ್ಲಿ ಗೋಲ್ಡ್ ಸ್ಮಗ್ಲಿಂಗ್
Saturday, January 29, 2022
ಮಂಗಳೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 6.24 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನದಲ್ಲಿ ಬಂದಿಳಿದ ಮಂಗಳೂರು ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಆತನಲ್ಲಿ ವಾಷರ್ ರೀತಿಯಲ್ಲಿದ್ದ ಬೆಳ್ಳಿ ಲೇಪಿತ 24 ಕ್ಯಾರೆಟ್ ಚಿನ್ನವನ್ನು ಪತ್ತೆಯಾಗಿದೆ. ಈ ಚಿನ್ನವನ್ನು ಮಕ್ಕಳ ಬಟ್ಟೆಯೊಳಗೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ತಕ್ಷಣ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಚಿನ್ನ ವಶಪಡಿಸಿಕೊಂಡಿದ್ದಾರೆ.
ಈತನಿಂದ 129.500 ಗ್ರಾಂ ತೂಕದ 6,42,320 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.