ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ, ಹೊಟ್ಟೆಯಲ್ಲಿದ್ದ ಮಗು ಸಾವು ಪ್ರಕರಣ-ವೈದ್ಯರ ನಿರ್ಲಕ್ಷ್ಯ ಆರೋಪ(hospital death)
Friday, January 21, 2022
ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಹಾಗೂ ಶಿಶು ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣವೆಂದು ಮೃತರ ಕುಟುಂಬಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ವಿಟ್ಲ ಮೂಲದ ಸವಿತಾ ಎಂಬವರನ್ನು ಅವರ ಕುಟುಂಬಸ್ಥರು ಹೆರಿಗೆಗೆಂದು ದಾಖಲಿಸಿದ್ದರು. ಈ ಸಂದರ್ಭ ಗರ್ಭಿಣಿಯ ಹೊಟ್ಟೆಯಲ್ಲಿದ್ದ ಶಿಶು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಆ ಬಳಿಕ ಸಂಜೆಯವರೆಗೂ ವೈದ್ಯರು ಸರಿಯಾದ ಗರ್ಭಿಣಿಗೆ ಚಿಕಿತ್ಸೆ ನೀಡದ ಪರಿಣಾಮ ಸಂಜೆಯ ವೇಳೆಗೆ ಆಕೆ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಂಬಂಧಿಕರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡಿದಲ್ಲಿ ಪರಿಶೀಲನೆ ನೀಡಿ ಭರವಸೆ ನೀಡಿದ್ದಾರೆ.