Mangalore:ರಾಸಾಯನಿಕ ಸೋರಿಕೆ-ಸೀಫುಡ್ ಫ್ಯಾಕ್ಟರಿಯ 20 ಮಂದಿ ಕಾರ್ಮಿಕರು ಆಸ್ಪತ್ರೆಗೆ

Mangalore:ರಾಸಾಯನಿಕ ಸೋರಿಕೆ-ಸೀಫುಡ್ ಫ್ಯಾಕ್ಟರಿಯ 20 ಮಂದಿ ಕಾರ್ಮಿಕರು ಆಸ್ಪತ್ರೆಗೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಬೈಕಂಪಾಡಿಯಲ್ಲಿನ ಸೀಫುಡ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆಯಾಗಿ 20 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ.




ಇಲ್ಲಿನ ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಈ  ದುರ್ಘಟನೆ ಇಂದು ಬೆಳಗ್ಗೆ ಸಂಭವಿಸಿತ್ತು. ಈ ಘಟಕದಲ್ಲಿ 80 ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಇವರಲ್ಲಿ 20 ಮಂದಿಗೆ ಉಸಿರಾಟದ ತೊಂದರೆಯುಂಟಾಗಿ  ಅಸ್ವಸ್ಥರಾಗಿದ್ದಾರೆ‌. 




ಅಸ್ವಸ್ಥರನ್ನು ನಗರದ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ಪಣಂಬೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



Ads on article

Advertise in articles 1

advertising articles 2

Advertise under the article