ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ನಿಂದ ಹೀನ ರಾಜಕಾರಣ: ನಳಿನ್ ಕುಮಾರ್ ಕಟೀಲು
Monday, January 3, 2022
ಮಂಗಳೂರು: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ನ ಹೀನ ರಾಜಕಾರಣ. ಕೊರೊನಾ ಒಂದು, ಎರಡು ಅಲೆಗಳ ಸಂದರ್ಭ ಕಾಂಗ್ರೆಸ್ ಟೀಕೆ ಮಾಡಿರೋದನ್ನು ಬಿಟ್ಟರೆ ಬೇರೆ ಯಾವ ಕೆಲಸವನ್ನು ಮಾಡಿಲ್ಲ. ಜನರನ್ನು ದಾರಿತಪ್ಪಿಸುವ ಕೆಲಸ ಮಾಡಿದ್ದರು. ಕಾಂಗ್ರೆಸ್ ಜನರನ್ನು ಕೊಲ್ಲುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಕಾಂಗ್ರೆಸ್ ಸರಕಾರ ಇರುವಾಗ ಯಾಕೆ ಮೇಕೆದಾಟು ಬಗ್ಗೆ ಚರ್ಚೆಯಾಗಿಲ್ಲ. ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆ ಕಾರ್ಯರೂಪಕ್ಕೆ ತರಲು ಸಂಪೂರ್ಣ ಬದ್ಧವಾಗಿದ್ದು, ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಮೇಕೆದಾಟು ಯೋಜನೆಯನ್ನು ನಾವು ಮಾಡಿಯೇ ಮಾಡುತ್ತೇವೆ. ಅದಕ್ಕೆ ಕಾಂಗ್ರೆಸ್ ನವರ ಪಾದಯಾತ್ರೆಯ ಅಗತ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ರಾಜಕೀಯ ಲಾಭಕ್ಕೋಸ್ಕರ ನಾಟಕ ಮಾಡುತ್ತಿದೆ. ಅಲ್ಲದೆ ಅವರು ಮೇಕೆದಾಟು ಪಾದಯಾತ್ರೆ ಮಾಡುವ ಮೂಲಕ ಕೊರೊನಾವನ್ನು ಹೆಚ್ಚು ಮಾಡಲು ಹೋಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಆರೋಪ ಮಾಡಿದರು.