Bangalore: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ

Bangalore: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ

2022ರ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ  ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ  
ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ರಾದ ಎಮ್.ಸಿ. ವೇಣುಗೋಪಾಲ್ ಅವರ ನೇತೃತ್ವದಲ್ಲಿ ಇಂದು (ಫೆಬ್ರವರಿ 9,2022) ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿಧಾನ ಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ  ಭೇಟಿ ಮಾಡಿ ಮನವಿ ಸಲ್ಲಿಸಲಾಯಿತ್ತು. 
 
2022ರ ಸಾಲಿನ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ  ರಾಜ್ಯದ ಅತಿ ಹಿಂದುಳಿದ 197 ಜಾತಿಗಳನ್ನೊಳಗೊಂಡ  ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ  ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್, ಕಾರ್ಯದರ್ಶಿ ಎಮ್. ನಾಗರಾಜ್ ಹಾಗೂ ಖಜಾಂಚಿ ಎಲ್.ಎ. ಮಂಜುನಾಥ್,  ಪದಾಧಿಕಾರಿಗಳಾದ ಎನ್. ಶಿವಂಶಕರ್, ಪಿ.ಆರ್. ರಮೇಶ್, ನೆ.ಲ. ನರೇಂದ್ರ ಬಾಬು, ರಾಜ್ಯ  ಕ್ಷತ್ರಿಯ ಸಂಘದ ಅಧ್ಯಕ್ಷ ಎನ್. ಗಣೇಶ್ ರಾಜ್, ಕಾರ್ಯದರ್ಶಿ ಚಂದ್ರ ಶೇಖರ್ ಪಿ. ರಾಜು, ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ಆರ್. ರಾಧಾಕೃಷ್ಣ,  ಮೊದಲಾದವರು ಉಪಸ್ಥಿತಿರಿದ್ದರು. 
ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಬಾರದು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಜಾರಿಗೊಳಿಸಬೇಕು, ಸುಭಾಷ್ ಅಡಿ ಸಮಿತಿಯನ್ನು ರದ್ದು ಪಡಿಸಬೇಕು. ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ  ಪಟ್ಟಿಗೆ ಕರ್ನಾಟಕದ 70 ಜಾತಿ - ಉಪಜಾತಿಗಳನ್ನು  ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮನವಿ ಸಲ್ಲಿಸಲಾಯ್ತು.  
ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ತಿಳಿಸಿದರು.    

Ads on article

Advertise in articles 1

advertising articles 2

Advertise under the article