Bangalore: ಹಿಜಾಬ್-ಕೇಸರಿ ವಿವಾದ: ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ-ವಿಚಾರಣೆ ಮುಂದೂಡಿ ಹೈಕೋರ್ಟ್ ಮಧ್ಯಂತರ ಅದೇಶ
Thursday, February 10, 2022
ಬೆಂಗಳೂರು: ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಮಧ್ಯಂತರ ಆದೇಶ ನೀಡಲಾಗಿದೆ.
ಅಂತಿಮ ತೀರ್ಪು ಬರುವವರೆಗೆ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.ಇದರ ಜೊತೆಗೆ ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಆದೇಶ ಮಾಡಿದೆ.