ಮುಂಬೈ: ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕೈಂಡಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.