Mandya:'ಜೈ ಶ್ರೀರಾಮ್' ಘೋಷಣೆಗೆ ಪ್ರತಿಯಾಗಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ ಜಮಾತೆ ಉಲೇಮಾ ಸಂಘಟನೆಯಿಂದ 5 ಲಕ್ಷ ರೂ.ನಗದು ಬಹುಮಾನ !
Wednesday, February 9, 2022
ಮಂಡ್ಯ : ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ ಜಮಾತ್ ಉಲೆಮಾ ಎ-ಹಿಂದ್ ಸಂಘಟನೆ 5 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾನೆ.
ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹುಡುಗರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದ ಸಂದರ್ಭದಲ್ಲಿ,ಮುಸ್ಕಾನ್ ಖಾನ್ ಎಂಬ ಮುಸ್ಲಿಂ ವಿದ್ಯಾರ್ಥಿನಿ ಬಂದಿದ್ದು ಜೈಶ್ರೀರಾಮ್ ಘೋಷಣೆಯಿಂದ ಸಿಟ್ಟಿಗೆದ್ದ ವಿದ್ಯಾರ್ಥಿನಿ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಕೂಗಿ ಪ್ರತಿಭಟಿಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಭಾರೀ ಪ್ರಚಾರ ಪಡೆದಿದ್ದು ಮುಸ್ಲಿಂ ಸಂಘಟನೆಗಳನ್ನು ಆಕರ್ಷಿಸಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಮಾತ್ ಉಲೆಮಾ-ಎ-ಹಿಂದ್ ಪ್ರಮುಖನಾದ ಮೈಸೂರು ಮೂಲದ ಮಹಮೂದ್ ಮದನಿ ಎಂಬವರು ಜಾಲತಾಣದಲ್ಲಿ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಘಟನೆ ಬಗ್ಗೆ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿನಿ ಮುಸ್ಕಾನ್ ಖಾನ್, ನಾನು ಎಂದಿನಂತೆ ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು ಈ ವೇಳೆ ವಿದ್ಯಾರ್ಥಿಗಳ ಗುಂಪು 'ಜೈ ಶ್ರೀರಾಮ್' ಎಂದು ಘೋಷಣೆ ಕೂಗತೊಡಗಿದ್ದರು. ನಾನು ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಕೂಗಿದೆ. ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.ಬಹುಮಾನದ ಬಗ್ಗೆ ನನಗೇನು ಮಾಹಿತಿ ಇಲ್ಲ ಎಂದಿದ್ದಾರೆ.