Mangalore: ಅಪ್ರಾಪ್ತ ವಿದ್ಯಾರ್ಥಿನಿಯರು, ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ(Hitech )

Mangalore: ಅಪ್ರಾಪ್ತ ವಿದ್ಯಾರ್ಥಿನಿಯರು, ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ(Hitech )

ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಯನ್ನು ‌ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷನನ್ನು ಅರೆಸ್ಟ್ ಮಾಡಿದ್ದಾರೆ.

ಶಮೀನಾ, ಆಯಿಷಮ್ಮ, ಸಫ್ವಾನ್ ಬಂಧಿತ ಆರೋಪಿಗಳು. ಇಬ್ಬರು ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಅಪ್ರಾಪ್ತೆಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳು 
ಮಂಗಳೂರಿನ ನಂದಿಗುಡ್ಡೆ ಸಮೀಪದ ರಿಯಾನಾ ರೆಸಿಡೆನ್ಸಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಆರೋಪಿಗಳು ಯುವತಿಯರಿಗೆ, ಅಪ್ರಾಪ್ತ ಬಾಲಕಿಯರಿಗೆ ಹಣದ ಆಮಿಷವೊಡ್ಡಿ, ವೀಡಿಯೋ ದೃಶ್ಯಾವಳಿ ಇಟ್ಟುಕೊಂಡು ಯುವತಿಯರು, ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದಾರೆ. 

ಈ ಬಗ್ಗೆ ಅಪ್ರಾಪ್ತ ವಿದ್ಯಾರ್ಥಿ ಕಾಲೇಜು ಪ್ರಾಂಶುಪಾಲರಿಗೆ ಈ ವಿಚಾರ ತಿಳಿಸಿ ಅವರು ಚೈಲ್ಡ್ ಲೈನ್ ನವರ ಗಮನಕ್ಕೆ ತಂದಿದ್ದಾರೆ. ಅವರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪೊಕ್ಸೊ ಕಾಯ್ದೆ, ಐ.ಟಿ.ಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಮೂವರು ಅರೋಪಿಗಳನ್ನು ಬಂಧಿಸಿದ್ದಾರೆ.‌ ಹೆಚ್ಚಿನ ತನಿಖೆ ನಡೆಸುವಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲು ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article