Mangalore: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ.ಹಿಜಾಬ್ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ.ಕರಾವಳಿಯನ್ನು ನಾವು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ನಳಿನ್ ಕುಮಾರ್ ಕಟೀಲು(Nalin kumar kateel)

ಮಂಗಳೂರು: ಇಂಥಹದ್ದಕ್ಕೆ ಎಲ್ಲೂ ಅವಕಾಶ ನೀಡುವುದಿಲ್ಲ. ಕರಾವಳಿಯನ್ನು ನಾವು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಂಗಳೂರಿನಲ್ಲಿಂದು ಹೇಳಿದರು.

ಶಾಲೆ ಸರಸ್ವತಿ ಮಂದಿರವಾಗಿದ್ದು, ಅಲ್ಲಿ ಶಾಲೆಯ ನಿಯಮ, ಅನುಶಾಸನದೊಂದಿಗೆ ಶಿಕ್ಷಣ ಪಡೆಯುವುದು ಧರ್ಮ. ಶಾಲೆಯೊಳಗೆ ಬೇರೆ ಧರ್ಮಗಳನ್ನು ತರುವುದು ಸರಿಯಲ್ಲ.‌ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದ್ದು, ಯಾರಿಗೆ ಇಂತಹ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಿಕೊಳ್ಳಲಿ ಎಂದರು.

ಹಿಜಾಬ್ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆಯನ್ನು ನಾನು ನೋಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಟಿಪ್ಪುಜಯಂತಿ ನಡೆಸಿ ಸಾಮರಸ್ಯ ಹಾಳು ಮಾಡಿದ್ದರು. ಶಾದಿಭಾಗ್ಯದ ಹೆಸರಿನಲ್ಲಿ ಕೆಲವೇ ಕೆಲವು ಸಮುದಾಯಗಳಿಗೆ ಅವರು. ಯೋಜನೆ ನೀಡಿದ್ದರು. ಈಗ ಹಿಜಾಬ್ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಸಿದ್ದರಾಮಯ್ಯ ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಹಿಜಾಬ್ ವಿಚಾರವೀಗ ನ್ಯಾಯಾಲಯದಲ್ಲಿದೆ. ಅಲ್ಲಿಂದ ಯಾವ ರೀತಿಯ ನಿರ್ದೇಶನ ಬರುತ್ತದೆಂದು ಕಾದು ನೋಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Ads on article

Advertise in articles 1

advertising articles 2

Advertise under the article