Mysuru: ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ರೊಮ್ಯಾನ್ಸ್ ಮಾಡಿದ ಮುಖ್ಯೋಪಾಧ್ಯಾಯ ಅರೆಸ್ಟ್(teacher arrest)

Mysuru: ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ರೊಮ್ಯಾನ್ಸ್ ಮಾಡಿದ ಮುಖ್ಯೋಪಾಧ್ಯಾಯ ಅರೆಸ್ಟ್(teacher arrest)

ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದ ಮುಖ್ಯೋಪಾಧ್ಯಾಯನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಅನಿಲ್ ಕುಮಾರ್ ಬಂಧಿತ‌ ಆರೋಪಿ. ಆರೋಪಿಯು ಎಚ್ ಡಿ.ಕೋಟೆ ತಾಲೂಕಿನ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ತರಗತಿಯಲ್ಲಿ ರೊಮ್ಯಾನ್ಸ್‌ನಲ್ಲಿ ತೊಡಗಿದ್ದಾಗ, ಈ ದೃಶ್ಯವನ್ನು ಅದೇ ಶಾಲೆಯ ವಿದ್ಯಾರ್ಥಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು.




ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಘಟನೆ ಸಂಬಂಧ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ನಂತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೂಡ ಈ ಮುಖ್ಯ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿತ್ತು.

ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದಂತೆ  ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Ads on article

Advertise in articles 1

advertising articles 2

Advertise under the article