ವಿಶ್ವ ಕ್ರಿಕೆಟ್ ನ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನಿಧನ- ಹಾರ್ಟ್ ಆಟಾಕ್ ನಿಂದ ಸಾವು ಸಂಭವಿಸಿರುವ ಶಂಕೆ ದಶಕಗಳ ಕಾಲ ವಿಶ್ವ ಕ್ರಿಕೆಟ್ ನಲ್ಲಿ ಆಕರ್ಷಕ ಸ್ಪಿನ್ ಬೌಲಿಂಗ್ ಮೂಲಕ ಮಿಂಚಿದ ತಾರೆ(Former Australian Cricketer Shane Warne dies of heart attack)
Friday, March 4, 2022
ಸಿಡ್ನಿ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ,ವಿಶ್ವ ಕ್ರಿಕೆಟ್ ನ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ ನಿಧನದ ಬಗ್ಗೆ ಆಸ್ಟ್ರೇಲಿಯಾದ ಫಾಕ್ಸ್ ಕ್ರಿಕೆಟ್ ರಿಪೋರ್ಟ್ ಮಾಡಿದೆ.
53 ವರ್ಷ ವಯಸ್ಸಿನ ಶೇನ್ ವಾರ್ನ್ ಗೆ ಹೃದಯಾಘಾತದಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ಇದ್ದು, ಶೇನ್ ವಾರ್ನ್ ಹಠಾತ್ ನಿಧನಕ್ಕೆ ವಿಶ್ವ ಕ್ರಿಕೆಟ್ ಸಂತಾಪ ವ್ಯಕ್ತಪಡಿಸಿದೆ.
ಇಂದು (ಶುಕ್ರವಾರ 04) ಮುಂಜಾನೆ ರೋಡ್ ಮಾರ್ಷ್ ನಿಧನಕ್ಕೆ ಸಂತಾಪ ಸೂಚಿಸಿ ವಾರ್ನ್ ಟ್ವೀಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಶೇನ್ ವಾರ್ನ್ ನಿಧನ ಸುದ್ದಿ ವಲ್ಡ್ ಕ್ರಿಕೆಟ್ ಗೆ ಬರ ಸಿಡಿಲಿನಂತೆ ಅಪ್ಪಳಿಸಿದೆ. ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಮತ್ತು ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ ನಿಧನರಾಗಿರುವ ಬಗ್ಗೆ ಅವರ ಮ್ಯಾನೇಜ್ ಮೆಂಟ್ ಕಂಪನಿ ಹೇಳಿಕೆಯನ್ನು ಪ್ರಕಟ ಮಾಡಿದ್ದು "ತಮ್ಮ ಮನೆಯಲ್ಲಿ ಯಾವುದೇ ಪ್ರತಿಕ್ರಿಯೆ ಇಲ್ಲದೇ ಬಿದ್ದ ರೀತಿಯಲ್ಲಿ ಕಂಡು ಬಂದಿದ್ದರು. ವೈದ್ಯಕೀಯ ಸಿಬ್ಬಂದಿಯ ಅವಿರತ ಪ್ರಯತ್ನದ ಹೊರತಾಗಿಯೂ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.