ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಎಫ್ ಐ ಆರ್ ದಾಖಲಾಗಿರುವ ಕಾಲೇಜು ಸಂಚಾಲಕ , ಶಿಕ್ಷಕರ ರಾಜೀನಾಮೆಗೆ ಒತ್ತಾಯ-ಶೈಕ್ಷಣಿಕ ವ್ಯವಸ್ಥೆಗಳ ಕೊರತೆ ವಿರೋಧಿಸಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು
Friday, May 20, 2022
ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದರು.
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು , ಇತ್ತಿಚೆಗೆ ಅವರ ಬಂಧನ ಕೂಡ ಆಗಿತ್ತು , ಜಾಮೀನಿನಲ್ಲಿ ಬಿಡುಗಡೆಯಾಗಿರುವ ಸಂಚಾಲಕರು ಕಾಲೇಜಿನ ಅವ್ಯವಸ್ಥೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರನ್ನು ಮುಂದಿಟ್ಟು ವಿದ್ಯಾರ್ಥಿಗಳಿಗೆ ಕಿರುಕಿಳ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಎಫ್.ಐ.ಆರ್ ದಾಖಲಾಗಿರುವ ಕಾಲೇಜು ಸಂಚಾಲಕರ ಪ್ರಕಾಶ್ ಶೆಣೈ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಎಫ್.ಐ.ಆರ್.ದಾಖಲಾಗಿರುವ ಇಬ್ಬರು ಶಿಕ್ಷಕರನ್ನು ತಕ್ಷಣ ವಜಾ ಮಾಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.