Bangalore: ‘ಮಗಳು ಜಾನಕಿ’ಯ ಚಂದು ಭಾರ್ಗಿ ರವಿ ಅಸ್ತಂಗತ .ಖ್ಯಾತ ಕನ್ನಡ ಕಿರುತೆರೆ ನಟ ಮಂಡ್ಯ ರವಿ ಇನ್ನಿಲ್ಲ
Wednesday, September 14, 2022
ಕನ್ನಡದ ಖ್ಯಾತ ಕಿರುತೆರೆ ನಟ ಮಂಡ್ಯ ರವಿ (ರವಿ ಪ್ರಸಾದ್) ನಿಧನರಾಗಿದ್ದಾರೆ. ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ರವಿ ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ,BGS ಗ್ಲೋಬಲ್ ಆಸ್ಪತ್ರೆಯಲ್ಲಿ ರವಿ ಪ್ರಸಾದ್ ವಿಧಿವಶರಾಗಿದ್ದಾರೆ.ಅವರಿಗೆ 42 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ರವಿ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಇಂದು ಸಾವನ್ನಪಿದ್ದಾರೆ.
ಕಿರುತೆರೆಯಲ್ಲಿ ಮಿಂಚು, ಮುಕ್ತ ಮುಕ್ತ, ಮಗಳು ಜಾನಕಿ ಧಾರಾವಾಹಿಗಳಲ್ಲಿ ಮಿಂಚಿದ್ದ ರವಿ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.