ಬೆಳ್ತಂಗಡಿ: ಉಗ್ರ ಚಟುವಟಿಕೆ ಬುಡಸಮೇತ ಕಿತ್ತು ಹಾಕದಿದ್ದರೆ ದೇಶಕ್ಕೆ ಅಪಾಯ: ಪೇಜಾವರ ಸ್ವಾಮೀಜಿ

ಬೆಳ್ತಂಗಡಿ: ಉಗ್ರ ಚಟುವಟಿಕೆ ಬುಡಸಮೇತ ಕಿತ್ತು ಹಾಕದಿದ್ದರೆ ದೇಶಕ್ಕೆ ಅಪಾಯ: ಪೇಜಾವರ ಸ್ವಾಮೀಜಿ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಉಗ್ರರ ನಂಟಿನ ಬಗ್ಗೆ ಇದ್ದ ಸಂಶಯಗಳು ಇಂದು ಮತ್ತೆ ಸತ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಈ ವಿಷಯದಲ್ಲಿ ತೀವ್ರ ರೀತಿಯಲ್ಲಿ ತನಿಖೆ ನಡೆಸಬೇಕು. ಉಗ್ರವಾದವನ್ನು ಬುಡ ಸಮೇತ ಕಿತ್ತುಹಾಕಬೇಕು. ಯಾವ ಒಬ್ಬ ಉಗ್ರನು ಇಲ್ಲಿ ಉಳಿಯಬಾರದು ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಗ್ರಹಿಸಿದ್ದಾರೆ.


ಶ್ರೀಗಳು ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ಉಗ್ರರ ಸಂಚು ಪತ್ತೆಯಾಗಿದೆ. ಇದನ್ನು ಈ ಮೊದಲೇ ಸರಕಾರ ಮಟ್ಟ ಹಾಕಬೇಕಿತ್ತು. ಕೇಂದ್ರ, ರಾಜ್ಯ ಸರಕಾರಗಳು ಈಗಾಗಲೇ ಬಂಧಿಸಿದವರನ್ನು ತೀವ್ರ ವಿಚಾರಣೆ ನಡೆಸಿ, ಇದರ ಮೂಲವನ್ನು ಬೇರು ಸಹಿತ ಕಿತ್ತೊಗೆಯುವ ಕಾರ್ಯ ಆಗಬೇಕು. ಈ ವಿಚಾರಗಳಿಗೆ ಕೋಮು‌ ಬಣ್ಣಹಚ್ಚಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಯುತ್ತಿದ್ದು ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದು. ದೇಶದಲ್ಲಿ ಸದಾ ಶಾಂತಿ ಸುವ್ಯವಸ್ಥೆ ಇರಬೇಕು ಎಂಬುದೇ ನಮ್ಮೆಲ್ಲರ ಆಶಯವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಉಗ್ರಚಟುವಟಿಕೆಗಳಿಗೆ ಅಂತ್ಯ ಹಾಡಬೇಕು ಎಂದರು.

Ads on article

Advertise in articles 1

advertising articles 2

Advertise under the article