ಪ್ರಧಾನಮಂತ್ರಿಗಳಿಂದ ವಿವಿಧ ಯೋಜನೆಗಳು ಲೋಕಾರ್ಪಣೆ:ಹಲವು ಯೋಜನೆಗಳಿಗೆ ಶಂಕುಸ್ಥಾಪನೆ
Friday, September 2, 2022
ಮಂಗಳೂರು:ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್.ಎಮ್.ಪಿ.ಎ) ಹಾಗೂ ಎಂ.ಆರ್.ಪಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ 3800 ಕೋಟಿ ರೂ.ಗಳಿಗೂ ಹೆಚ್ಚಿನ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು ಹಾಗೂ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ,
ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಸಂಸದರಾದ ನಳೀನ್ ಕುಮಾರ್ ಕಟೀಲ್, ಕೇಂದ್ರದ ಜಲ ಸಾರಿಗೆ ಸಚಿವರಾದ ಸರ್ಬಾನಂದ ಸೋನೋವಾಲ್, ಶಾಂತನೂ ಠಾಕೂರ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಶಾಸಕರು ಹಾಗೂ ಅಧಿಕಾರಿಗಳು ವೇದಿಕೆಯಲ್ಲಿದ್ದರು.