ದ.ಕನ್ನಡ: ಕುಕ್ಕೆ ಸುಬ್ರಹ್ಮಣ್ಯ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರ ಸೇವೆಯ ದರದಲ್ಲಿ ಭಾರೀ ಏರಿಕೆ
Thursday, September 22, 2022
ಹಿಂದು ಧಾರ್ಮಿಕ ದತ್ತಿ ಇಲಾಖೆ ಅಧೀನಕ್ಕೆ ಒಳಪಟ್ಟ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರಕ್ಕೆ ದರವನ್ನು ಒಂದು ಸಾವಿರ ಹೆಚ್ಚಿಸಲಾಗಿದೆ.ಇನ್ನು ಮುಂದೆ 4200 ರೂ. ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದೆ.
ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಪದೋಷ ನಿವಾರಣೆಗಾಗಿ ನಡೆಸುವ ಸರ್ಪಸಂಸ್ಕಾರ ಸೇವೆಯ ಸೇವಾ ದರವನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದಂತೆ 3,200 ರೂ.ನಿಂದ 4,200 ರೂ.ಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಭಕ್ತಾದಿಗಳು ಸಹಕರಿಸಬೇಕಾಗಿ ದೇವಳದ ಪ್ರಕಟನೆಯಲ್ಲಿ ತಿಳಿಸಲಾಗಿದೆ.