ಮಂಗಳೂರು: 15ದಿನಗಳೊಳಗೆ ಸುರತ್ಕಲ್ ಟೋಲ್ ಗೇಟ್ ಸಮಸ್ಯೆ ಪರಿಹಾರ; ಎನ್ಎಚ್ಎಐ ಪ್ರಾದೇಶಿಕ ಅಧಿಕಾರಿ mng

ಮಂಗಳೂರು: 15ದಿನಗಳೊಳಗೆ ಸುರತ್ಕಲ್ ಟೋಲ್ ಗೇಟ್ ಸಮಸ್ಯೆ ಪರಿಹಾರ; ಎನ್ಎಚ್ಎಐ ಪ್ರಾದೇಶಿಕ ಅಧಿಕಾರಿ mng


ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ನ ಸಮಸ್ಯೆ 15 ದಿನಗಳ ಒಳಗೆ ಸಂಪೂರ್ಣ ಪರಿಹಾರವಾಗಲಿದೆ ಎಂದು ಭಾರತೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಂ.ಕೆ. ವತಾರೆ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆದ್ದಾರಿ ನಿರ್ಮಾಣ ಹಾಗೂ ನಿರ್ವಹಣೆಗಳಿಗೆ ಸಂಬಂಧಿಸಿದ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,  ಸಾಕಷ್ಟು ದಿನಗಳಿಂದ ಇತ್ಯರ್ಥ ಪಡಿಸಲು ಯತ್ನಿಸುತ್ತಿದ್ದ  ಸಮಸ್ಯೆ 15 ದಿನಗಳಲ್ಲಿ ಬಗೆಹರಿಯಲಿದೆ. ಅದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಎನ್ಐಟಿಕೆ ಸುರತ್ಕಲ್ ನಿಂದ ನಂತೂರಿನವರೆಗೆ ರಸ್ತೆಗುಂಡಿಯಿಂದಾಗಿ ಅಪಘಾತಗಳು ಸಂಭವಿಸಿದರೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗುವುದು. ತಕ್ಷಣ ಗುತ್ತಿಗೆದಾರರಿಗೆ ನೋಟಿಸ್ ನೀಡಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Ads on article

Advertise in articles 1

advertising articles 2

Advertise under the article