ಹಿಜಾಬ್ ಸಂಬಂಧ 2 ನ್ಯಾಯಮೂರ್ತಿಗಳಿಂದ ಭಿನ್ನ ಅಭಿಪ್ರಾಯ: ಸಿಜೆಐ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ
Wednesday, October 12, 2022
ಕುತೂಹಲ ಕೆರಳಿಸಿದ್ದ ಕರ್ನಾಟಕ ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ವಿಭಜನೆ ತೀರ್ಪು ನೀಡಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ.
ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಅನುಮತಿಸಿ, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದರು. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದ್ದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ.