Bangalore: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ-ಸಚಿವ ಸುನಿಲ್ ಕುಮಾರ್
Thursday, October 20, 2022
ಬೆಂಗಳೂರು: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ದೈವಾರಾಧನೆ ಬಗೆಗೆ ಚೇತನ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು.