ತಿರುವನಂತಪುರಂ:ಕೇರಳದ ಮಾಜಿ ಗೃಹ ಸಚಿವ, ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

ತಿರುವನಂತಪುರಂ:ಕೇರಳದ ಮಾಜಿ ಗೃಹ ಸಚಿವ, ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

ತಿರುವನಂತಪುರಂ:ಮಾಜಿ ಗೃಹ ಸಚಿವ, ಕೇರಳ ರಾಜ್ಯ ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್(68) ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

2006 ರಿಂದ 2010ರ ವರೆಗೆ
ವಿ.ಎಸ್.ಅಚ್ಚುತಾನಂದನ್ ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಿಯೇರಿ ಬಾಲಕೃಷ್ಣನ್ ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದರು. ಕಳೆದ ಮಾರ್ಚ್ ನಲ್ಲಿ ಕೊಚ್ಚಿಯಲ್ಲಿ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಸತತ ಮೂರನೇ ಬಾರಿಗೆ ಕೊಡಿಯೇರಿ ಅವರನ್ನು ರಾಜ್ಯ ಕಾರ್ಯದರ್ಶಿ ಯನ್ನಾಗಿ ಆಯ್ಕೆ ಮಾಡಲಾಗಿತ್ತು.

ನಾಲ್ಕು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದ ಅವರಿಗೆ ಅಮೆರಿಕದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. 2020ರಲ್ಲಿ ಒಂದು ವರ್ಷ ಗಳ ಕಾಲ ಅಮೆರಿಕದಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಆನಂತರ, ಆರೋಗ್ಯದಲ್ಲಿ ಚೇತರಿಕೆ ಕಂಡು ಕೇರಳಕ್ಕೆ ಮರಳಿದ್ದರು. ಆದರೆ ಕಳೆದ ಎಪ್ರಿಲ್ ತಿಂಗಳಲ್ಲಿ ಮತ್ತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು. 

ಕೊಡಿಯೇರಿ ಬಾಲಕೃಷ್ಣನ್ ಅವರು ತಲಶೇರಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾನ್ಯ ಶಿಕ್ಷಕರ ಮಗನಾಗಿದ್ದ ಬಾಲಕೃಷ್ಣನ್ SSI ಸಂಘಟನೆಯ ಮೂಲಕ ಕಮ್ಯುನಿಸ್ಟ್ ಸೇರಿದ್ದರು.

Ads on article

Advertise in articles 1

advertising articles 2

Advertise under the article