Mangalore: ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

Mangalore: ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.

 ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮಂಗಳೂರು ಫಳೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇರಲಿಲ್ಲ ಹಾಗೂ ಯಾವುದೇ ಮಾರಕಾಸ್ತ್ರ ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ ಎಂದಿದ್ದಾರೆ.

ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಶಾಸಕ ಹರೀಶ್ ಪೂಂಜಾ ಚಾಲಕ ನೀಡಿದ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Ads on article

Advertise in articles 1

advertising articles 2

Advertise under the article