ಮಂಗಳೂರು: ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಯ ರಾಜ್ಯ ಸರಕಾರದ ಆದೇಶ ಪ್ರತಿಯನ್ನು ಸುದ್ದಿಗೋಷ್ಠಿಯಲ್ಲೇ ಹರಿದು ಹಾಕಿದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಯ ರಾಜ್ಯ ಸರಕಾರದ ಆದೇಶ ಪ್ರತಿಯನ್ನು ಸುದ್ದಿಗೋಷ್ಠಿಯಲ್ಲೇ ಹರಿದು ಹಾಕಿದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ


ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಯ ರಾಜ್ಯ ಸರಕಾರದ ಆದೇಶ ಪ್ರತಿಯನ್ನು
ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿಯವರು ಸುದ್ದಿಗೋಷ್ಠಿಯಲ್ಲಿ ಹರಿದು ಹಾಕಿರುವ ಘಟನೆ ಇಂದು ನಡೆಯಿತು.

ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಕ್ರೋಶಿತರಾದ ಅವರು ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸೇರಿದಂತೆ ತಮ್ಮ ಹಲವಾರ ಬೇಡಿಕೆಗಳನ್ನು ಈಡೇರಿಸದೆ ರಾಜ್ಯ ಸರಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಇದೀಗ ಸರಕಾರ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದೆ ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪಿಸಲು ಹೊರಟಿದೆ. ಇದಕ್ಕೆ ಹಿಂದೆ - ಮುಂದೆ ಏನೂ ಇಲ್ಲ. ಮೇಲಿನ ವರ್ಗದವರು ನಿಗಮ ಕೊಡುವ ರಾಜ್ಯ ಸರಕಾರ. ನಮ್ಮ ಮಾತಿಗೆ ಸೊಪ್ಪು ಹಾಕುತ್ತಿಲ್ಲ. ಇದು ಸರಕಾರದ ನಾಟಕ ಎಂದು ಬ್ರಹ್ಮಶ್ರೀ ನಾರಾಯಣ ಕೋಶ ಸ್ಥಾಪನೆಯ ರಾಜ್ಯ ಸರಕಾರದ ಆದೇಶ ಪ್ರತಿಯನ್ನು ಹರಿದು ಹಾಕಿದರು.

ಈ ಕೋಶವನ್ನು ಯಾವಾಗ ಬೇಕಾದರೂ ತೆಗೆದು ಹಾಕಬಹುದು. ಇದಕ್ಕೊಂದು ಅಧ್ಯಕ್ಷ, ಡೈರೆಕ್ಟರ್ ಇಲ್ಲ‌. ಅದಕ್ಕೆ ನಿವೃತ್ತ ಸರಕಾರಿ ಅಧಿಕಾರಿ ಅಥವಾ ನಿವೃತ್ತ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಸರಕಾರ ಇದನ್ನು ಕಾಟಚಾರಕ್ಕೆ ಮಾಡುತ್ತಿದೆ. ಆದ್ದರಿಂದ ನಮ್ಮ ಸಮುದಾಯಕ್ಕೆ ದ್ರೋಹ ಎಸಗಿರುವ ಸರಕಾರದ ನಡೆಯನ್ನು ಖಂಡಿಸುತ್ತದೆ‌‌. ಇಂತಹ ಕೋಶ ನಮಗೆ ಅವಶ್ಯಕತೆಯಿಲ್ಲ. ನಮಗೆ ನಾರಾಯಣ ಗುರು ನಿಗಮ ಆಗಬೇಕು. ಅದಕ್ಕೆ 500 ಕೋಟಿ ರೂ. ಮೀಸಲಿಡಬೇಕು. ಆದ್ದರಿಂದ ಸರಕಾರದ ಬೋಗಸ್ ಕೋಶದ ಆದೇಶ ಪ್ರತಿಯನ್ನು ಹರಿದು ಹಾಕಿದ್ದೇನೆ ಎಂದು ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಆಕ್ರೋಶಿತರಾಗಿ ಹೇಳಿದರು.

Video



Ads on article

Advertise in articles 1

advertising articles 2

Advertise under the article