ಕುಲಾಲ ಅಭಿವೃದ್ದಿ ನಿಗಮ ಸ್ಥಾಪನೆಗೆ ಆಗ್ರಹ ಬೆಂಗಳೂರು ಕುಲಾಲ ಸಂಘದ 50ನೇ ವರ್ಷದ ಸುವರ್ಣ ಸಂಭ್ರಮ
Sunday, November 13, 2022
ಬೆಂಗಳೂರು : ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದ ಕುಲಾಲ ಸಮುದಾಯದ ಅಭಿವೃದ್ದಿಗಾಗಿ ನಿಗಮ ಸ್ಥಾಪನೆ ಮಾಡಬೇಕು ಎಂದು ಸರ್ಕಾರಕ್ಕೆ ಬೆಂಗಳೂರು ಕುಲಾಲ ಸಂಘ ಒತ್ತಾಯಿಸಿದೆ.
ಬೆಂಗಳೂರು ಕುಲಾಲ ಸಂಘದ 50ನೇ ವರ್ಷದ ಸುವರ್ಣ ಸಂಭ್ರಮ ಹಿನ್ನಲೆಯಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕುಲಾಲ ಸಂಘ ಬೆಂಗಳೂರು ವತಿಯಿಂದ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕುಲಾಲ ಸಂಘದ ಅಧ್ಯಕ್ಷರು ಪುರುಷೋತ್ತಮ್ ಚೇಂಡ್ಲಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕುಲಾಲ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸರಕಾರ ನಿಗಮ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಘದ ವತಿಯಿಂದ ಒತ್ತಾಯ ಮಾಡಿದರು.ಈ ಕಾರ್ಯಕ್ರಮದಲ್ಲಿ ಬೆಂಗಳೂರು ಕುಲಾಲ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.