ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಸಂತ್ರಸ್ತ ಆಟೋ ಡ್ರೈವರ್ ಗೆ 50 ಸಾವಿರ ರೂ. ಪರಿಹಾರ ನೀಡಿದ ಗೃಹ ಸಚಿವರು
Wednesday, November 23, 2022
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಸಂತ್ರಸ್ತ ಆಟೋ ಡ್ರೈವರ್ ಪುರುಷೋತ್ತಮ್ ಅವರ ಆರೋಗ್ಯವನ್ನು ವಿಚಾರಿಸಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ಹೇಳಿದರು. ವೈಯಕ್ತಿಕ ನೆಲೆಯಲ್ಲಿ 50 ಸಾವಿರ ರೂ. ಪರಿಹಾರ ನೀಡಿದರು.
ಈ ವೇಳೆ ಗೃಹ ಸಚಿವರು ಶಂಕಿತ ಭಯೋತ್ಪಾದಕ ಶಾರೀಕ್ ಆರೋಗ್ಯವನ್ನು ವಿಚಾರಿಸಿದ್ದಾರೆ. ಶಾರೀಕ್ ಗುಣಮುಖನಾಗಲು ಇನ್ನೂ 25 ದಿನಗಳು ಬೇಕಾಗುತ್ತದೆ. 8ಮಂದಿ ತಜ್ಞ ವೈದ್ಯರಿಂದ ಶಾರೀಕ್ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆಟೋರಿಕ್ಷಾದಲ್ಲಿ ಬ್ಲಾಸ್ಟ್ ಆಗಿರುವ ವೇಳೆ ಸಿಡಿದಿರುವ ಕುಕ್ಕರ್ ಮುಚ್ಚಳ ಶಾರೀಕ್ ನ ಕುತ್ತಿಗೆಯ ಭಾಗಕ್ಕೆ ಬಡಿದಿದೆ. ಅಲ್ಲದೆ ಆತ ಸುಟ್ಟ ಗಾಯಗಳಿಂದ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಭೀತಿಯಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಶಾರಿಕ್ ಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡ ಕಾರಣ ವಿಶೇಷ ಚಿಕಿತ್ಸೆ ಒದಗಿಸಲಾಗುತ್ತಿದೆ. ಇನ್ನು ಮೂರು ವಾರಗಳ ಕಾಲ ಚಿಕಿತ್ಸೆ ಮುಂದುವರೆಯುವ ಸಾಧ್ಯತೆ. ಶಾರಿಕ್ ಎಳೆಯ ಪ್ರಾಯವಾಗಿರುವುದರಿಂದ ಚಿಕಿತ್ಸೆಗೆ ಅನುಕೂಲವಾಗಿದೆ. ಸುಟ್ಟ ಗಾಯಗಳಾಗಿರುವುದರಿಂದ ಪರಿಸ್ಥಿತಿ ಸ್ಥಿರವಾಗಿದ್ದರೂ ಸೂಕ್ಷ್ಮವಾಗಿದೆ ಎಂದು ಆಸ್ಪತ್ರೆಯ ವೈದ್ಯ ಮೂಲಗಳ ಮಾಹಿತಿ ನೀಡಿದೆ.