ಮಣಿಪಾಲದ ಕೆಎಂಸಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ;ಮೂತ್ರಕೋಶದಲ್ಲಿತ್ತು 672 ಗ್ರಾಂ ತೂಕದ ಕಲ್ಲು!
Saturday, November 26, 2022
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡ ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ತೆಗೆದುಹಾಕಿದೆ.
60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದು, ರೋಗಿಗೆ ಸರಳ. ಸಿಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶದಲ್ಲಿ ಗಡ್ಡೆಗಳಿರುವುದು. ಪತ್ತೆಯಾಯಿತು.
ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಡಾ. ಪದ್ಮರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ 11.5 37.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆಯಲಾಯಿತು,
ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ತಂಡದಲ್ಲಿ ವಿಶ್ವನಾಥ್, ಡಾ.ನಿಶಾ, ಡಾ.ವಿವೇಕ್ ಮೈ ಮತ್ತು ಡಾ.ಕೃಷ್ಣ ಉಪಸ್ಥಿತರಿದ್ದರು. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡವನ್ನು ಮಾಹ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್, ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅಭಿನಂದಿಸಿದ್ದಾರೆ.