Mangalore: ಅನ್ಯಕೋಮಿನ ಯುವಕನಿಗೆ ಥಳಿಸಿದ ಹಿಂದೂ ಕಾರ್ಯಕರ್ತರ ಮೇಲೆ ಕ್ರಮ; ಎಡಿಜಿಪಿ ಅಲೋಕ್ ಕುಮಾರ್
Friday, November 25, 2022
ಮಂಗಳೂರು: ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅನ್ಯಕೋಮಿನ ವಿದ್ಯಾರ್ಥಿಯೋರ್ವ ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಗುರುವಾರ ಸಂಜೆ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ಜೋಡಿ ಪ್ರಯಾಣಿಸುತ್ತಿತ್ತು. ಆದರೆ ಬಸ್ ನಂತೂರು ತಲುಪಿದಾಗ ಹಿಂದೂ ಕಾರ್ಯಕರ್ತರು ನಾಲ್ವರು ಅಪರಿಚಿತರು ಬಸ್ಸಿನೊಳಗೆ ನುಗ್ಗಿದ್ದಾರೆ. ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿತ್ತು. ಆದರೆ ಸ್ಥಳೀಯ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಇಮ್ರಾನ್ ಖಾನ್ ಎಂಬವರು ಟ್ವೀಟ್ ಮಾಡಿ ಗಮನಸೆಳೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ADGP ಅಲೋಕ್ ಕುಮಾರ್ ಈ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.