ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
Friday, November 18, 2022
ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಮಂಗಳೂರು ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿಯಾದರು.
ಈ ವೇಳೆ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಶಾಸಕ ಡಾ.ವೈ.ಭರತ್ ಶೆಟ್ಟಿ, ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತಿತರರು ಉಪಸ್ಥಿತರಿದ್ದರು.