ಮಂಗಳೂರು: ತಲಪಾಡಿ ಆರ್ ಟಿ ಒ ಚೆಕ್ ಪೋಸ್ಟ್ ಗೆ ಲೋಕಾಯುಕ್ತ ದಾಳಿ
Monday, November 7, 2022
ಮಂಗಳೂರು: ಭ್ರಷ್ಟಾಚಾರ, ದುರಾಡಳಿತ ಹಾಗೂ ಅಕ್ರಮ ನಡೆಯುತ್ತಿರುವ ಖಚಿತ ಮಾಹಿತಿಯ ಮೇರೆಗೆ ತಲಪಾಡಿ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಮಂಗಳೂರು ಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರಡಿಯಲ್ಲಿ ಸುಮೋಟೊ ಪ್ರಕರಣ ದಾಖಲಿಸಿ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಅ.7ರಂದು ಸಂಜೆ 7.30ಸುಮಾರಿಗೆ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿದೆ. ಈ ದಾಳಿಯ ವೇಳೆ ದಳ್ಳಾಳಿಗಳ ಮೂಲಕ ಹಣ ವಸೂಲಿ, ದಾಖಲಾತಿಗಳಲ್ಲಿ ನ್ಯೂನ್ಯತೆ ಹಾಗೂ ಗೂಗಲ್ ಪೇ, ಫೋನ್ ಪೇ ಮೂಲಕ ಹಣದ ವ್ಯವಹಾರ ನಡೆಯುತ್ತಿರುವ ಬಗ್ಗೆ ಲೋಕಾಯುಕ್ತ ಗಮನಕ್ಕೆ ಬಂದಿದೆ.
ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಬೆಂಗಳೂರಿಗೆ ಸಮಗ್ರ ವರದಿಯನ್ನು ಕಳುಹಿಸಲಾಗುತ್ತದೆ ಎಂದು ಲೋಕಾಯುಕ್ತ ಮಂಗಳೂರು ಎಸ್ಪಿ ಲಕ್ಷ್ಮೀ ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.