ಮಂಗಳೂರು: ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದವರ ಮೇಲೆ ಪ್ರಕರಣ ದಾಖಲು
Monday, November 7, 2022
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಯವರಿಗೆ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಹಿನ್ನಲೆಯಲ್ಲಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೂಪೇಶ್ ಶೆಟ್ಟಿಯವರು ಬಿಗ್ ಬಾಸ್ ನಲ್ಲಿ ನೀಡಿರುವ ಕೆಲವೊಂದು ಹೇಳಿಕೆಗಳನ್ನು ಇರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಅವರ ಮನೆಯವರು ಪೊಲೀಸ್ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್., ಈ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದ್ದೇವೆ. ಸೆನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.