ಮಂಗಳೂರು: ಆಟೋರಿಕ್ಷಾದಲ್ಲಿ ಸ್ಪೋಟ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವೈಫಲ್ಯವಾಗಿಲ್ಲ ಶಾಸಕ ವೇದವ್ಯಾಸ ಕಾಮತ್
Sunday, November 20, 2022
ಮಂಗಳೂರು: ನಗರದ ಗರೋಡಿ ಸಮೀಪ ನಿನ್ನೆ ಸಂಜೆ ಸಂಚಾರದಲ್ಲಿದ್ದ ಆಟೋರಿಕ್ಷಾದಲ್ಲಿ ನಡೆದಿರುವ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಯಾವುದೇ ರೀತಿಯಲ್ಲಿ ವೈಫಲ್ಯವಾಗಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಘಟನೆ ನಡೆದಿರುವ ಸ್ಥಳಕ್ಕೆ ಇದೀಗ ಬಂದು ಪರಿಶೀಲನೆ ನಡೆಸಿ ಬಳಿಕ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವೊಂದು ಘಟನೆಗಳು ಸಾಮೂಹಿಕವಾಗಿ ನಡೆಯುವುದರಿಂದ ಗುಪ್ತಚರ ಇಲಾಖೆಯ ಗಮನಕ್ಕೆ ಬರುತ್ತದೆ. ಆದರೆ ಈ ಘಟನೆಯಲ್ಲಿ ಓರ್ವ ವ್ಯಕ್ತಿಯಿಂದ ಕೃತ್ಯ ನಡೆದಿರುವಾಗ ಇದು ಗುಪ್ತಚರ ಇಲಾಖೆಯ ಗಮನಕ್ಕೆ ಬರದಂತೆ ಹೋಗುತ್ತದೆ. ಆದರೆ ಮಂಗಳೂರಿನಲ್ಲಿ ಮತ್ತೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಿದ್ದೇವೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಉನ್ನತ ಮಟ್ಟದ ತನಿಖೆ ನಡೆಸಲಿದೆ ಎಂದು ಹೇಳಿದರು.
ಮಂಗಳೂರು ಕರ್ನಾಟಕ - ಕೇರಳ ಗಡಿಪ್ರದೇಶವಾಗಿರುವ ಹಿನ್ನಲೆಯಲ್ಲಿ ಇಲ್ಲಿ ಈ ಹಿಂದೆಯೇ ಎನ್ಐಎ ಘಟಕ ಸ್ಥಾಪಿಸಬೇಕೆಂದು ಮನವಿ ಮಾಡಿದ್ದೆ. ಈ ಘಟನೆಯ ಬಳಿಕ ಇದೀಗ ಮತ್ತೆ ಸಚಿವರಲ್ಲಿ ಒತ್ತಾಯಿಸಿ ಎನ್ಐಎ ಘಟಕವನ್ನು ಮಂಗಳೂರಿನಲ್ಲಿ ಅನುಷ್ಠಾನ ಮಾಡುವಲ್ಲಿ ನೂರಕ್ಕೆ ನೂರು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.