ಮಂಗಳೂರು: ದ.ಕ.ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 62,829 ಆಕ್ಷೇಪಣೆ ಸಲ್ಲಿಕೆ

ಮಂಗಳೂರು: ದ.ಕ.ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 62,829 ಆಕ್ಷೇಪಣೆ ಸಲ್ಲಿಕೆ


ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, 2022ರ ನ. 9ರಿಂದ ಡಿ.7ರವರೆಗೆ 62,829 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ 16,065 ಅರ್ಜಿಗಳ ಕ್ಷೇತ್ರ ಪರಿಶೀಲನೆಗೆ ವಹಿಸಲಾಗಿದ್ದು, 1449 ಅರ್ಜಿಗಳು ತಿರಸ್ಕಾರಗೊಂಡಿವೆ. 8,173 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಹೇಳಿದರು.

2022ರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಳಿಕ ಅಂತಿಮವಾಗಿ 29,410 ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಅದೇ ರೀತಿ 73,783 ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದರಲ್ಲಿ 21,537 ಹೆಸರುಗಳನ್ನು ಮರಣ ಹೊಂದಿದ ಕಾರಣಕ್ಕೆ ತೆಗೆದುಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನುಸಾರ 18ರಿಂದ 20 ವರ್ಷ ವಯಸ್ಸಿನ 9,925 ಹೊಸ ಮತದಾರರಿದ್ದಾರೆ. ಪರಿಷ್ಕರಣೆಯ ವೇಳೆ 21,000 ಮಂದಿಯಿಂದ ಅರ್ಜಿ ಬಂದಿದೆ. ಅದನ್ನು ಪರಿಶೀಲಿಸಲಾಗುತ್ತಿದೆ. ಎರಡು ಕ್ಷೇತ್ರಗಳಲ್ಲಿ ಮತದಾರ ಚೀಟಿಯನ್ನು ಹೊಂದಿರುವ 27 ಪ್ರಕರಣಗಳನ್ನು ಗುರುತಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಮತದಾರರ ಹೆಸರು ಡಿಲೀಟ್ ಆಗಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಈಗಾಗಲೇ ರಾಜಕೀಯ ಪಕ್ಷಗಳಿಗೆ ಕರಡು ಮತದಾರರ ಪಟ್ಟಿ ಪರಿಶೀಲಿಸಿ ಅರ್ಹ ಮತದಾರರು ಇರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಚುನಾವಣಾ ದಿನದಂದು ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದ ರೀತಿಯಲ್ಲಿ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದರು.

Ads on article

Advertise in articles 1

advertising articles 2

Advertise under the article