ವರದಕ್ಷಿಣೆ ಕಿರುಕುಳ; ಚಂದನವನ ನಟಿ ಅಭಿನಯಗೆ ಜೈಲು ಶಿಕ್ಷೆ

ವರದಕ್ಷಿಣೆ ಕಿರುಕುಳ; ಚಂದನವನ ನಟಿ ಅಭಿನಯಗೆ ಜೈಲು ಶಿಕ್ಷೆ

ಬೆಂಗಳೂರು: ಕನ್ನಡ ಚಲನಚಿತ್ರ ನಟಿ ಅಭಿನಯಗೆ ವರದಕ್ಷಿಣೆ ಕೇಸ್‌ನಲ್ಲಿ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ಕೊಟ್ಟ ಹಿನ್ನೆಲೆ ನಟಿ ಅಭಿನಯ ಕುಟುಂಬದ ಮೇಲೆ ಪ್ರಕರಣ ದಾಖಲಾಗಿತ್ತು.
ಅನುಭವ ಚಿತ್ರದ ಮೂಲಕ ಪ್ರಖ್ಯಾತಿಗಳಿಸಿದ್ದ ನಟಿ ಅಭಿನಯ ಕಳೆದ ಹಲವು ವರ್ಷಗಳಿಂದ ಸಿನಿಮಾ ಮತ್ತು ಸೀರಿಯಲ್‌ನಲ್ಲಿ ನಟನೆ ಮಾಡ್ತಿದ್ದಾರೆ. ಅಭಿಯನ ಅವರ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆ 2002ರಲ್ಲಿ ಪ್ರಕರಣ ದಾಖಲಾಗಿತ್ತು.

 1998ರಲ್ಲಿ ನಟಿ ಅಭಿನಯ ಸೋದರ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿತ್ತು. ಮದುವೆ ವೇಳೆ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣವನ್ನು ವರದಕ್ಷಿಣೆ ರೂಪದಲ್ಲಿ ಪಡೆದಿದ್ದರು. ಬಳಿಕ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ನೀಡುತ್ತಿದ್ದರು. ಅಷ್ಟು ಮಾತ್ರವಲ್ಲದೆ ಲಕ್ಷ್ಮೀದೇವಿ ಅವರನ್ನು ಮನೆಗೆ ಸೇರಿಸಿಕೊಳ್ಳದೆ ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು.

 ಪೋಷಕರಿಗೆ ಅವಮಾನ ಮಾಡಿದ ಆರೋಪ ಹಿನ್ನೆಲೆ ಅಭಿನಯ ಸೇರಿ ಕುಟುಂಬದ ವಿರುದ್ಧ 2002ರಲ್ಲಿ ಚಂದ್ರಾಲೇಔಟ್ ಠಾಣೆಯಲ್ಲಿ ಲಕ್ಷ್ಮೀ ದೇವಿ ದೂರು ಸಲ್ಲಿಸಿದ್ದರು. ಆರೋಪಪಟ್ಟಿ ಸಲ್ಲಿಕೆಯಾಗಿ ಐವರು ಆರೋಪಿಗಳಿಗೆ 2012ರಲ್ಲಿ ಕೋರ್ಟ್  2 ವರ್ಷ ಶಿಕ್ಷೆ ಪ್ರಕಟಿಸಿತ್ತು. ನಂತರ ಆರೋಪಿಗಳು ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನ ಖುಲಾಸೆಗೊಳಿಸಿ ಆದೇಶ ನೀಡಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹೈಕೋರ್ಟ್‌ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್‌ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ. A1-ಶ್ರೀನಿವಾಸ್ ಹಾಗೂ A-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆ ಉಳಿದ ಮೂವರಾದ ನಟಿ ಅಭಿನಯ ಅವರ ತಾಯಿ A-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ A-4 ಚೆಲುವರಾಜ್, A-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

Ads on article

Advertise in articles 1

advertising articles 2

Advertise under the article