ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹೋದರ ಹೃದಯಾಘಾತದಿಂದ ನಿಧನ
Thursday, December 15, 2022
ಮಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ಸಹೋದರ, ಹೈಕೋರ್ಟ್ ವಕೀಲ ಫಾರೂಕ್ (49) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಹೈಕೋರ್ಟ್ ವಕೀಲರಾಗಿದ್ದು, ಇದೀಗ ಬೆಂಗಳೂರಿನಲ್ಲಿ ನೆಲೆಸಿದ ಫಾರೂಕ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿ. ಇಂದು ಬೆಳಗ್ಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮೂಡಬಿದಿರೆಗೆ ತಂದು ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.