ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳಿಗೆ ಶುಭ ಸುದ್ದಿ;ಗೌರವಧನ ದುಪ್ಪಟ್ಟುಗೊಳಿಸಿ ರಾಜ್ಯ ಸರ್ಕಾರದ ಆದೇಶ
Sunday, December 18, 2022
ಬೆಂಗಳೂರು : ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಸಿಹಿ ಸುದ್ದಿ ನೀಡಲಾಗಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗೌರವ ಧನವನ್ನು ದುಪ್ಪಟ್ಟು ಮಾಡಲಾಗಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರಿಗೆ ರೂಪಾಯಿ 3,000, ಉಪಾಧ್ಯಕ್ಷರಿಗೆ ರೂಪಾಯಿ 2,000 ಹಾಗೂ ಸದಸ್ಯರಿಗೆ ಒಂದು ಸಾವಿರ ಮಾಸಿಕ ಗೌರವಧನವನ್ನು ನಿಗದಿಪಡಿಸಲಾಗಿತ್ತು.
ಇದೀಗ ಗೌರವಧನವನ್ನು ಪರಿಷ್ಕರಿಸಲಾಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ರೂ.6,000, ಉಪಾಧ್ಯಕ್ಷರಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧನವನ್ನು ನೀಡಲು ಆದೇಶ ಹೊರಡಿಸಲಾಗಿದೆ.