ಮಂಗಳೂರು:ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ
Tuesday, December 27, 2022
ಮಂಗಳೂರು: ನಗರದ ಹೊರವಲಯದ ಕೃಷ್ಣಾಪುರ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೇರಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ಕೃಷ್ಣಾಪುರ ನಾಲ್ಕನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ ಬಂಧಿತ ಆರೋಪಿ. ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಲಕ್ಷ್ಮೀಶ ದೇವಾಡಿಗನನ್ನು ಕೊಲೆ ಕೃತ್ಯಕ್ಕೆ ಸಹಕರಿಸಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತರಲ್ಲಿ ಇಬ್ಬರು ಜಲೀಲ್ ರನ್ನು ಫ್ಯಾನ್ಸಿ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದು ಕೊಲೆಗೈದಿದ್ದರು. ಮತ್ತೋರ್ವನು ಕೊಲೆ ಆರೋಪಿಗಳನ್ನು ಬೈಕ್ ನಲ್ಲಿ ಎಸ್ಕೇಪ್ ಮಾಡಿಸಲು ಸಹಕರಿಸಿದ್ದನು. ಪೊಲೀಸ್ ತನಿಖಾ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಮೊನ್ನೆ ರಾತ್ರಿಯೇ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ದಸ್ತಗಿರಿ ಮಾಡಿದೆ. ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದೆ.