ಮಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಇಂದು ದ.ಕ.ಜಿಲ್ಲಾ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಇಂದು ದ.ಕ.ಜಿಲ್ಲಾ ಪ್ರವಾಸ


ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಸಂಜೆ 6.05ಕ್ಕೆ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು‌ ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ತೆರಳಿದ್ದಾರೆ. ನಂತರ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8:30ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9:15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Ads on article

Advertise in articles 1

advertising articles 2

Advertise under the article