ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಎನ್ಐಎ ಹಸ್ತಾಂತರದ ಬಗ್ಗೆ ಪೊಲೀಸ್ ಕಮಿಷನರ್ ಹೇಳಿದ್ದೇನು?

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಎನ್ಐಎ ಹಸ್ತಾಂತರದ ಬಗ್ಗೆ ಪೊಲೀಸ್ ಕಮಿಷನರ್ ಹೇಳಿದ್ದೇನು?


ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಯುಎಪಿಎ ಆ್ಯಕ್ಟ್ ಅನ್ವಯ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಬೇಕೆಂದು ಡಿಜಿಪಿಯಿಂದ ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಅಧಿಕೃತವಾಗಿ ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ನಗರ‌ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ವಿಚಾರಣೆಗೆ ವೈದ್ಯರಲ್ಲಿ ಮನವಿ ಮಾಡುತ್ತಲೇ ಇದ್ದೆವು‌. ನಿನ್ನೆ ಆತನನ್ನು ವಿಚಾರಣೆ ಮಾಡಬಹುದು ಎಂದು ವೈದ್ಯರು ಹೇಳಿರುವ ಹಿನ್ನಲೆಯಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಆರೋಪಿಗೆ ಕೇಳಿ ಪ್ರಕರಣದ ತನಿಖೆ ನಡೆಸಲಾಗಿದೆ. ಬಳಿಕ ವೈದ್ಯರ ಸಲಹೆಯ ಮೇರೆಗೆ ಆತನಿಗೆ ರೆಸ್ಟ್ ಕೊಡಲಾಗಿದೆ. ಇದೀಗ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿರುವ ಹಿನ್ನಲೆಯಲ್ಲಿ ಸಂಬಂಧಿಸಿದ ತನಿಖಾಧಿಕಾರಿ ಹಾಗೂ ಎನ್ಐಎ ಅಧಿಕಾರಿಗಳ ನಿರ್ದೇಶನದನ್ವಯ ತನಿಖೆ ಮುಂದುವರಿಸಲಾಗುತ್ತದೆ. ಅಲ್ಲದೆ ಎನ್ಐಎ ಸಹಾಯಕ್ಕೆ ಆಯ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದರು.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಾಳುವಾಗಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಆರೋಗ್ಯ ಚೇತರಿಸಿಕೊಂಡಿದೆ. ಐಸಿಯುವಿನಿಂದ ಅವರನ್ನು ಬೇರೆ ವಾರ್ಡ್ ಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆರೋಪಿ ಶಾರೀಕ್ ಕೂಡಾ ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಗಾಯಾಳುವಾಗಿದ್ದು, ಆಸ್ಪತ್ರೆಯಲ್ಲಿ ಈತನಿಗೂ ಚಿಕಿತ್ಸೆ ಮುಂದುವರಿದಿದೆ‌. ಬಹಳಷ್ಟು ದಿನಗಳ ಕಾಲ ವೆಂಟಿಲೇಟರ್ ನಲ್ಲಿಟ್ಟು ಆತನಿಗೆ ಚಿಕಿತ್ಸೆ ನೀಡಲಾಗಿತ್ತು. ಈ ಹಿಂದೆ ಈತನ ಮೇಲೆ ಮಂಗಳೂರಿನಲ್ಲಿ ಎರಡು ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗದ ಪ್ರಕರಣವೊಂದರಲ್ಲೂ ಈತ ಆರೋಪಿಯಾಗಿದ್ದ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು.
Video

Ads on article

Advertise in articles 1

advertising articles 2

Advertise under the article