ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ; ಈಜು ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದ ಮುಲ್ಲಕಾಡು ಶಾಲೆಯ ಶಿಕ್ಷಕರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ; ಈಜು ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದ ಮುಲ್ಲಕಾಡು ಶಾಲೆಯ ಶಿಕ್ಷಕರು

ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ ಜಿಲ್ಲಾಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ಮುಲ್ಲಕಾಡು ಸರ್ಕಾರಿ ಶಾಲೆಯ ಶಿಕ್ಷಕರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಪ್ರೌಢಶಾಲೆಯ ಸಹಶಿಕ್ಷಕಿ ಕೃಪಾ ಇವರು 50ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಫ್ರೀ ಸ್ಟೈಲ್ ಬೆಳ್ಳಿ ಪದಕ, ಸಹಶಿಕ್ಷಕಿ ಶಶಿಕಲಾ ಕೆ.ಎನ್. 100 ಮೀ. ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ, ಪ್ರಾಥಮಿಕ ವಿಭಾಗದ ಪದವೀಧರ ಶಿಕ್ಷಕ ನಾಗರಾಜ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 200 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕರ ಸಾಧನೆಗೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಉಸ್ಮಾನ್ ಜಿ. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲ ಮತ್ತು ಸಹಶಿಕ್ಷಕರು ಅಭಿನಂದಿಸಿದರು.ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಇವರು ತರಬೇತಿ ನೀಡಿರುತ್ತಾರೆ.

Ads on article

Advertise in articles 1

advertising articles 2

Advertise under the article