ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್
Saturday, December 17, 2022
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ನನ್ನು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಶನಿವಾರ ಬೆಳಗ್ಗೆ 6ಗಂಟೆಗೆ ಆತನನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಿಂದ ಶಂಕಿತ ಉಗ್ರ ಶಾರೀಕ್ ಗಾಯಗೊಂಡಿದ್ದನು. ಆದ್ದರಿಂದ ಆತನನ್ನು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.