ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪೊಲೀಸರಿಂದ ತನಿಖೆ
Sunday, December 25, 2022
ಮಂಗಳೂರು: ಕಾಟಿಪಳ್ಳದಲ್ಲಿ ನಡೆದಿರುವ ಜಲೀಲ್ ಹತ್ಯೆ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನಿನಡಿ ಶಿಕ್ಷಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಮೂಡುಬಿದಿರೆಯಲ್ಲಿ ನಡೆಯುವ ಜಾಂಬೂರಿ ಉತ್ಸವದಲ್ಲಿ ಪಾಲ್ಗೊಳ್ಳಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂತಹ ಘಟನೆ ನಡೆಯಬಾರದಿತ್ತು. ಈ ಘಟನೆಯಿಂದ ಮನಸ್ಸಿಗೆ ಬೇಸರವಾಗಿದೆ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ. ಈ ನಡುವೆ ಊಹಾಪೋಹಗಳು ಕೂಡಾ ಹರಿದಾಡುತ್ತಿದೆ. ಆದರೆ ಕರಾವಳಿಯ ಜನತೆ ಊಹಾಪೋಹಗಳಿಗೆ ಕಿವಿಗೊಡದಿರಿ ಎಂದರು.
Video
ಕ್ರಿಯೆಗೆ ಪ್ರತಿಕ್ರಿಯೆ ಹೇಳಿಕೆಯನ್ನು ನಾನು ಆ ಅರ್ಥದಲ್ಲಿ ಹೇಳಿಲ್ಲ. ಯಾವುದೇ ಪ್ರಕರಣವನ್ನು ವೈಭವೀಕರಣ ಮಾಡಲು ಹೋಗದಿರಿ. ಸಮಾಜದಲ್ಲಿ ಗಲಭೆ ಸೃಷ್ಟಿಸುವವರಿಗೆ ಅವಕಾಶ ಕೊಡದಿರಿ. ಅದನ್ನು ಹತ್ತಿಕ್ಕಿಸುವ ಕೆಲಸ ಮಾಡಬೇಕು. ಒಂದು ಪ್ರಕರಣವನ್ನು ಬಿಟ್ಟು ಬೇರೇನೋ ಮಾಡಲು ಹೋಗಬಾರದು. ಅದರಿಂದ ಇಂಥಹ ಪ್ರಕರಣಗಳ ನಿಜವಾದ ಕಾರಣ ಮರೆಯಾಗುತ್ತದೆ. ಪೊಲೀಸರು ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.