ಬಂಟ್ವಾಳ: ಸ್ಲೀಪರ್ ಕೋಚ್ ಬಸ್ಸಿನಲ್ಲಿ ಭಿನ್ನಕೋಮಿನ ಯುವಕ, ಯುವತಿಯರ  ಸಹಪ್ರಯಾಣ-ಕಲ್ಲಡ್ಕದಲ್ಲಿ ಬಸ್ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

ಬಂಟ್ವಾಳ: ಸ್ಲೀಪರ್ ಕೋಚ್ ಬಸ್ಸಿನಲ್ಲಿ ಭಿನ್ನಕೋಮಿನ ಯುವಕ, ಯುವತಿಯರ ಸಹಪ್ರಯಾಣ-ಕಲ್ಲಡ್ಕದಲ್ಲಿ ಬಸ್ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು


ಬಂಟ್ವಾಳ: ಭಿನ್ನಕೋಮಿನ ಯುವಕ, ಯುವತಿಯರು ಜೊತೆಯಾಗಿ ಪ್ರಯಾಣಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದ ಘಟನೆ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕದಲ್ಲಿ ನಿನ್ನೆ (ಗುರುವಾರ) ತಡರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಪ್ರಯಾಣಿಸುತ್ತಿದ್ದಾಳೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಬಸ್ಸನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು  ತಡೆದಿದ್ದಾರೆ. ಈ ಸಂದರ್ಭದಲ್ಲಿ ಯುವತಿ, ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಯೂ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ಬಳಿಕ ಠಾಣೆಯಲ್ಲಿ ಮಾತುಕತೆ ನಡೆಸಿ ಯುವತಿಯನ್ನು ಮನೆಯವರ ಜೊತೆ  ಕಳಿಸಲಾಗಿದೆ.

Ads on article

Advertise in articles 1

advertising articles 2

Advertise under the article