ಮಂಗಳೂರು: ಮಂಗಳೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಸಂತ್ರಸ್ತ ಬಾಲಕಿಯ ತಾಯಿ ಸಹಿತ ಮೂವರಿಗೆ ಕಠಿಣ ಸಜೆ

ಮಂಗಳೂರು: ಮಂಗಳೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಸಂತ್ರಸ್ತ ಬಾಲಕಿಯ ತಾಯಿ ಸಹಿತ ಮೂವರಿಗೆ ಕಠಿಣ ಸಜೆ


ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಸಂತ್ರಸ್ತೆಯ ತಾಯಿ ಸೇರಿದಂತೆ ಮೂವರಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ.

ಸಂತ್ರಸ್ತೆ ಬಾಲಕಿಯ ತಾಯಿ,ಕೋಟೆಕಾರು ನಿವಾಸಿ ಡೆರ್ವಿನ್ ಡಿಸೋಜ, ಹಾಗೂ ಕಲ್ಲಾಪು ನಿವಾಸಿ ಮೆಲ್ವಿನ್ ಡಿಸೋಜ ಶಿಕ್ಷೆಗೊಳಗಾದ ಅಪರಾಧಿಗಳು. ಡೆರ್ವಿನ್ ಡಿಸೋಜ ಸಂತ್ರಸ್ತ ಬಾಲಕಿಯ ತಾಯಿಯ ಸ್ನೇಹ ಬೆಳೆಸಿ ಆಕೆಯ ಮನೆಗೆ ಹೋಗುತ್ತಿದ್ದು, ಆರ್ಥಿಕ ಸಹಾಯ ಮಾಡುತ್ತಿದ್ದ. ಆ ಬಳಿಕ ಮಹಿಳೆಯ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ. ಇದು ಸ್ಥಳೀಯರಿಗೆ ತಿಳಿದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ಬಳಿಕ ಡೆರ್ವಿನ್ ಬಾಲಕಿಯನ್ನು ತನ್ನ ಸ್ನೇಹಿತ ಮೆಲ್ವಿನ್‌ ಮನೆಗೆ ಕರೆದೊಯ್ದು ಅಲ್ಲಿ ಅಕ್ರಮ ಬಂಧನದಲ್ಲಿರಿಸಿ ಹೊರಗೆ ಹೋಗದಂತೆ ನೋಡಿಕೊಂಡಿದ್ದಾನೆ. ಅಲ್ಲಿಯೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಬಗ್ಗೆ ಸಾರ್ವಜನಿಕರು 2016ರ ಡಿಸೆಂಬರ್‌ನಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೆ  ಮಾಹಿತಿ ನೀಡಿದ್ದರು. 

ಮಕ್ಕಳ ರಕ್ಷಣಾ ಘಟಕದವರು ಬಾಲಕಿಯನ್ನು ರಕ್ಷಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಉಳ್ಳಾಲ ಠಾಣೆಯ ಇನ್‌ ಸ್ಪೆಕ್ಟರ್‌ಗಳಾದ ಸವಿತ್ರ ತೇಜ ಮತ್ತು ಕೆ.ಆರ್.ಗೋಪಿಕೃಷ್ಣ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿ ಡೆರ್ವಿನ್ ಡಿಸೋಜಗೆ ಪೊಕ್ಸೊ ಪ್ರಕರಣದಲ್ಲಿ 15 ವರ್ಷ ಕಠಿನ ಸಜೆ ಮತ್ತು 75000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕೃತ್ಯಕ್ಕೆ ಸಹಕರಿಸಿದ ಮಹಿಳೆಗೆ 14 ವರ್ಷ ಕಠಿಣ ಸಜೆ ಮತ್ತು 25,000 ರೂ. ದಂಡ ವಿಧಿಸಿದ್ದಾಾರೆ. ಮತ್ತೋರ್ವ ಅಪರಾಧಿ ಮೆಲ್ವಿನ್‌ಗೆ 6 ತಿಂಗಳ ಸಜೆ, 30,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡಲು  ನ್ಯಾಯಾಧೀಶರು ಕಾನೂನು ಸೇವಾ ಪ್ರಾಾಧಿಕಾರಕ್ಕೆ ಆದೇಶಿಸಿದ್ದಾರೆ.‌ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

Ads on article

Advertise in articles 1

advertising articles 2

Advertise under the article